ರಾಜ್ಯ ಸರ್ಕಾರ ಶೇ 10ರಷ್ಟು ಕಮಿಷನ್ ಪಡೆಯುವ ಸರ್ಕಾರವಲ್ಲ, ಅದಕ್ಕಿಂತಲೂ ಹೆಚ್ಚಿನ ಕಮಿಷನ್ ಪಡೆಯುವ ಸರ್ಕಾರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ರಾಜಸ್ತಾನದ ಉದಯಪುರ ಮತ್ತು ಮೈಸೂರು ನಡುವಿನ ಹಮ್ ಸಫರ್ ರೈಲಿಗೆ ಚಾಲನೆ ನೀಡಿದ ನಂತರ ಮಹಾರಾಜ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾನು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಶೇ 10ರ ಕಮಿಷನ್