ಇಂದು ರಾಜ್ಯದ 2020-21ನೇ ಸಾಲಿನ ಬಜೆಟ್ ಮಂಡನೆ

ಬೆಂಗಳೂರು| pavithra| Last Modified ಗುರುವಾರ, 5 ಮಾರ್ಚ್ 2020 (08:45 IST)
ಬೆಂಗಳೂರು : ಇಂದು ನೇತೃತ್ವದ ಬಿಜೆಪಿ ಸರ್ಕಾರದ 2020-21ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು 2019ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಆಗಿದೆ. ಅಲ್ಲದೇ ಇದು ಯಡಿಯೂರಪ್ಪ ಅವರು ಸಿಎಂ ಆಗಿ 6ನೇ ಬಾರಿ ಮಂಡಿಸುತ್ತಿರುವ ಬಜೆಟ್ ಆಗಿದೆ. 


ಈ ಬಾರಿ ಬಜೆಟ್ ನಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡಲಿದ್ದು, ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :