ರಾಜ್ಯದಲ್ಲಿ ಕೋವಿಡ್ - 19 ಪರೀಕ್ಷೆಗೆ ಒಳಗಾದವರಲ್ಲಿ ಪಾಸಿಟಿವ್ ವರದಿ ದೃಢಪಡುತ್ತಿರುವವರ ಪ್ರಮಾಣ ಇಡೀ ದೇಶದಲ್ಲಿಯೇ ಅತ್ಯಂತ ಕಡಿಮೆ ಇದೆ. ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ 3,04,816 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 3450 ಮಂದಿಗೆ ಮಾತ್ರ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಂದರೆ ಇದರ ಪ್ರಮಾಣ ಶೇಕಡ 1.1 ರಷ್ಟಿದ್ದು, ಇದು ದೇಶದಲ್ಲಿಯೇ ಅತ್ಯಂತ ಕಡಿಮೆಯಾದದ್ದು ಎಂದಿದ್ದಾರೆ.ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಾಗ