ಜೆಡಿಎಸ್ ಬಿಜೆಪಿಯ ಬಿಟೀಂ ಎಂದಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೆಣಕಿದ್ದಾರೆ. ಅಪರೇಷನ್ ಕಮಲದ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ?