ಬೆಂಗಳೂರು : ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಶಾಸಕರ ರಾಜೀನಾಮೆ ಸ್ವಯಂ ಪ್ರೇರಣೆಯಿಂದ ಕೂಡಿಲ್ಲ. ವಾಸ್ತವಿಕತೆಯಿಂದ ಕೂಡಿಲ್ಲವೆಂದು ಅಂದಿನ ಸ್ಪೀಕರ್ ರಮೇಶ್