ಕೋಲಾರ : 10ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೋರ್ವ ಅನುಚಿತವಾಗಿ ವರ್ತಿಸಿರುವ ಘಟನೆ ಕೋಲಾರ ತಾಲೂಕಿನ ನರಸಾಪುರ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಕನ್ನಡ ಶಿಕ್ಷಕ ಪ್ರಕಾಶ್ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಶಿಕ್ಷಕ ಪ್ರಕಾಶ್, ಶಾಲೆಗೆ ಬರುವ ವಿದ್ಯಾರ್ಥಿನಿಯರಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಮಾಡುತ್ತಿದ್ದ.ಅಷ್ಟೇ ಅಲ್ಲದೇ ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು ಅಶ್ಲೀಲವಾಗಿ ವರ್ತಿಸುವುದು ಮಾಡುತ್ತಿದ್ದನೆಂಬ ಆರೋಪಗಳು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು