ಪ್ರಯಾಣಿಕರ ರೈಲುಗಳು ಮೇ 17ರವರೆಗೆ ಓಡೋದಿಲ್ಲ. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಮೇ 17ರವರೆಗೆ ಪ್ರಯಾಣಿಕರ ರೈಲುಗಳ ಸಂಚಾರ ಇರುವುದಿಲ್ಲ ಎಂದು ಕೊಂಕಣ ರೈಲ್ವೆ ತಿಳಿಸಿದೆ.ಈ ಕುರಿತು ಮಾಹಿತಿ ನೀಡಿರುವ ಕೊಂಕಣ ರೈಲ್ವೆ, ಮುಂದಿನ ಸೂಚನೆಯವರೆಗೂ ರೈಲು ಪ್ರಯಾಣದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇರುವುದಿಲ್ಲ.ಆದರೆ ಲಾಕ್ಡೌನ್ ಅವಧಿಯಲ್ಲಿ ದೇಶದ ವಿವಿಧೆಡೆ ಸಿಲುಕಿರುವ ವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಇತರ ನಾಗರೀಕರ