ಚೈತ್ರಾ ಕುಂದಾಪುರ ಡೀಲ್ ಪ್ರಕರಣ ಸಂಬಂಧ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.. ಮಂಗಳೂರಿನಲ್ಲಿ ಮಾತನಾಡಿದ ಅವರು, ಹಣವೇ ಬಿಜೆಪಿಯಲ್ಲಿ ಪ್ರಧಾನ ಅಲ್ಲ, ಹಾಗಿದ್ದರೆ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗುತ್ತಿರಲಿಲ್ಲ ಎಂದರು. ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ,