ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಿಜೆಪಿ ಶಾಸಕ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಬಜೆಟ್ ಅಧಿವೇಶನದ ಮೊದಲ ದಿನವೇ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯ್ದ ಘಟನೆ ನಡೆದಿದೆ. ಕಲಾಪದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೆಚ್.ಎಸ್.ದೊರೆಸ್ವಾಮಿ ವಿರುದ್ಧ ಅವಮಾನವಾಗೋ ರೀತಿ ಮಾತನಾಡಿದ್ದಾರೆ. ಈ ಕುರಿತು ಚರ್ಚೆ ಆಗಲಿ ಎಂದು ಪಟ್ಟು ಹಿಡಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ, ಪ್ರತಿಭಟನೆ, ಮಾತಿನ ತೀವ್ರ