ಹರಿಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕಿಡಿಕಾರಿದ್ದಾರೆ. INDIA ಮೈತ್ರಿಕೂಟ ಗೆಲ್ಲದಿದ್ದರೆ, ಇಡೀ ದೇಶ ಮಣಿಪುರ ಹಾಗೂ ಹರ್ಯಾಣ ರಾಜ್ಯದಂತೆ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ತಾನು ಚುನಾವಣೆಗೂ ಮುಂಚೆ ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕುರಿತ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ. ಸಾರ್ವಜನಿಕ ಸಂಸ್ಥೆಗಳನ್ನು ಹಾಳುಗೆಡವಿ, ಅವುಗಳನ್ನು ಕಾರ್ಪೊರೇಟ್ ಉದ್ಯಮಿಗಳಿಗೆ