ಕೊಪ್ಪಳ : ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸಾಯಿಸಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಒಂದನೇ ಹೆಚ್ಚುವರಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಎಂ.ಜಿ.ಶಿವಳ್ಳಿಯವರು ಕಲಂ 448 ಅನ್ವಯ ಒಂದು ವರ್ಷ ಜೈಲು ಶಿಕ್ಷೆ ಒಂದು ಸಾವಿರ ರೂ. ದಂಡ ಹಾಗೂ 302 ಕಲಂ ಅನ್ವಯ ಜೀವಾವಧಿ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ