ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಬಾರಿಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ.