ಥೂ..ಥೂ..ಥೂ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಇದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧು ಅವರನ್ನು ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ. ಮಹಾಮಸ್ತಾಕಾಭೀಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಣ ಲೂಟಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ಅವಕಾಶ ನೀಡಲಿಲ್ಲ. ಕಾರ್ಯಕರ್ತರ ಒತ್ತಡದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು