ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ದೀಪಾವಳಿ ಹಬ್ಬಕ್ಕೆಂದು ಉಡುಪಿಗೆ ತೆರಳಿದ್ದ ನಟಿ ಮೊನ್ನೆ 26ರಂದು ಮನೆಗೆ ಹಿಂದಿರುಗಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನವಾಗಿರುವುದನ್ನು ಪತ್ತೆಯಾಗಿದೆ. ಕೂಡಲೇ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ