40 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರೋದು ದೃಢಪಡುತ್ತಿದ್ದಂತೆ ಕೊರೊನಾ ವೈರಸ್ ಪೀಡಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 40 ವರ್ಷದ ಮಹಿಳೆಯಲ್ಲಿ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಮೆಕ್ಕಾ ಯಾತ್ರೆ ಕೈಗೊಂಡ ಗೌರಿಬಿದನೂರಿನ ನಾಲ್ಕು ಜನರಲ್ಲಿ ಆರಂಭದಲ್ಲಿ ಕೋವಿಡ್ ಪತ್ತೆಯಾಗಿತ್ತು. ಈ ಪೈಕಿ 72 ವರ್ಷದ ವೃದ್ಧೆಯೊಬ್ಬರು ಮಾರ್ಚ್ 25 ರಂದು ಮೃತಪಟ್ಟಿದ್ದರು.