ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಒವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಯಡಿಯೂರಪ್ಪ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿಯಲ್ಲಿ ಬಿಜೆಪಿಯ ಎಸ್ಸಿ ಮೋರ್ಚಾ ಹಮ್ಮಿಕೊಂಡಿದ್ದ ಹರಿಜನ ಸಮಾವೇಶಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ