ವಿಧಾನಸಭೆ ಚುನಾವಣೆ ಮುಗಿದು ಸಮ್ಮಿಶ್ರ ಸರಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿವೆ. ಆದರೆ ಇಲ್ಲೊಬ್ಬ ಶಾಸಕರು ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದಿದ್ದಾರೆ. ಯಾರ ದುರಾದೃಷ್ಟವೋ ಗೊತ್ತಿಲ್ಲ. ಗೆದ್ದು ಪ್ರಯೋಜನವಿಲ್ಲದಂತಾಗಿದೆ. ಹೀಗಂತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಐದು ಬಾರಿ ಶಾಸಕರಾಗಿರುವ ಹಾಲಾಡಿ ಈ ಹೇಳಿಕೆ ನೀಡಿದ್ದಾರೆ. ಕುಂದಾಪುರದ ಬಿಜೆಪಿ ಶಾಸಕರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಹಾಲಾಡಿ, ಬಜೆಟ್ ನಲ್ಲಿ ಕರಾವಳಿ