ರಾಮನಗರ, (ಆ.13): ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕವು ತನ್ನ ಹಕ್ಕನ್ನು ಮಾತ್ರ ಪ್ರತಿಪಾದಿಸುತ್ತಿದೆ. ನೆರೆ ರಾಜ್ಯದ ಒಂದು ಹನಿ ನೀರೂ ನಮಗೆ ಬೇಕಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ರಾಮನಗರದಲ್ಲಿ ಇಂದು (ಆ.13) ಮಾಧ್ಯಮಗಳ ಜತೆ ಮಾತನಾಡಿದ ಅವರು, ನ್ಯಾಯ ಸಮ್ಮತವಾಗಿ ಹಾಗೂ ಕಾನೂನಾತ್ಮಕವಾಗಿ ನಮಗೆ ಹಂಚಿಕೆಯಾಗಿರುವ ನೀರನ್ನು ಮಾತ್ರ ನಾವು ಕೇಳುತ್ತಿದ್ದೇವೆ ಹಾಗೂ ಅದನ್ನು ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ