ಸಿಎಂ ಸಿದ್ದರಾಮಯ್ಯರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ಮಾಧ್ಯಮ ವರದಿಗಳು ಕಪೋಲಕಲ್ಪಿತವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಒಬ್ಬರೆ ದೆಹಲಿಗೆ ತೆರಳಿದ್ದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ಹಲವು ಬಾರಿ ಕೂಡಾ ನಾನು ಒಬ್ಬನೆ ದೆಹಲಿಗೆ ತೆರಳಿದ್ದೇನೆ. ಸಿಎಂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ತೆರಳಿದ್ದಾರೆ ಎಂದರು. ಇಬ್ಬರು ಹಲವು ವರ್ಷಗಳಿಂದ ಜೊತೆಯಲ್ಲಿ ಸಾಮರಸ್ಯದಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ. ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎನ್ನುವುದೇ