ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯೂ ಸಂಪೂರ್ಣವಾಗಿ ಕಡಿಮೆಯಾಗಿರುವ ಹಿನ್ನೆಲೆ, ಮಾಸ್ಕ್ ಧರಿಸುವ ಕಡ್ಡಾಯ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಗರದಲ್ಲಿ ಮಾಸ್ಕ್ ಧರಿಸದವರಿಗೆ, ದೈಹಿಕ ಅಂತರ ಕಾಪಾಡದವರಿಗೆ ದಂಡ ವಿಧಿಸುತ್ತಿಲ್ಲ. ಬದಲಾಗಿ, ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸುವ ಕೆಲಸ ಮಾತ್ರ ನಡೆಸಲು ಮೌಖಿಕ ಸೂಚನೆ ನೀಡಲಾಗಿದೆ. ಪ್ರತಿನಿತ್ಯ ಮಾಸ್ಕ್ ದಂಡ ಹಾಗೂ ಸಾಮಾಜಿಕ ಅಂತರ ಕಾಯದ ಜನರಿಗೆ ದಂಡ ವಿಧಿಸುತ್ತಿದ್ದ ಮಾರ್ಷಲ್ಸ್, ದಿನವೊಂದಕ್ಕೆ ಒಂದೂವರೆ ಲಕ್ಷ ರೂಪಾಯಿಗೂ ಅಧಿಕ ದಂಡ