ತುಮಕೂರು : ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ಕೊಟ್ಟಿರುವುದನ್ನು ಟೀಕಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ವಿಡಿಯೋ ನೋಡಿದ್ದು ನೈತಿಕ ತಪ್ಪು, ಆ ತಪ್ಪಿಗೆ ತಕ್ಕ ಶಾಸ್ತಿಯಾಗಿದೆ. ಹಾಗಂತ ಅದು ದೇಶ ದ್ರೋಹದ ಕೆಲಸವಲ್ಲ. ಸಿದ್ದರಾಮಯ್ಯನವರು ಇದನ್ನೇ ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ನಾವೆಲ್ಲಾ ದೇವಸ್ಥಾನ ಎಂದು ಭಾವಿಸುವ ವಿಧಾನಸೌಧದ ಪ್ರಮುಖ ದ್ವಾರದ