ಬೆಂಗಳೂರು : ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಖಂಡಿಸಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಮೇಕೆದಾಟು ಯೋಜನೆ ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ