ಹುಬ್ಬಳ್ಳಿ : ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ