ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಕ್ತ ವಿಶ್ವವಿದ್ಯಾಲಯ ಮುಚ್ಚುವ ಹಂತವನ್ನು ತಲುಪಿದೆ ಎಂದು ಹೇಳಿದ್ದೇನೆಯೇ ಹೊರತು ಮುಚ್ಚುತ್ತೇವೆ ಎಂದು ಹೇಳಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ವಿಶ್ವವಿದ್ಯಾಲಯ ಸುಧಾರಣೆಗೆ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ನೇತೃತ್ವದಲ್ಲಿ ಐವರ ಸಮಿತಿಯನ್ನು ರಚಿಸಲಾಗಿದೆ. 15 ದಿನಗಳಲ್ಲಿ ಸಮಿತಿ ವರದಿ ನೀಡುತ್ತದೆ. ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳುತ್ತೇವೆ