ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಿಂದ ಹಿಂದೆ ಸರಿಯವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಿಂದ ಕೆ.ಎಸ್.ಈಶ್ವರಪ್ಪನವರೂ ಹಿಂದೆ ಸರಿದಿದ್ದಾರೆ ಎನ್ನುವುದು ಸುಳ್ಳು ಸುದ್ದಿ. ಬ್ರಿಗೇಡ್ ಕಾರ್ಯಚರಣೆಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬ್ರಿಗೇಡ್ ನಿಲ್ಲಿಸಲು ಅದೇನು ಕೊಳಾಯಿ ನೀರೆ ಎಂದು ಬ್ರಿಗೇಡ್ ಕಾರ್ಯದರ್ಶಿ ಮುಕಡಪ್ಪ ಸ್ಪಷ್ಟಪಡಿಸಿದ್ದಾರೆ.