ರಾಮನಗರ: ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗಳಿಗೆ ನಂಬರ್ ಅಷ್ಟೇ ಕೊಡೋದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದರು.ಬೆಂಗಳೂರು-ಮೈಸೂರು ದಶಪಥ ರಸ್ತೆ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.ಹೆದ್ದಾರಿಗೆ ಹೆಸರು ಇಡುವಂತೆ ಕೇಳಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಈ