ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಸಿದ್ದತೆ ಕುರಿತ ವರದಿಯನ್ನು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ತಳ್ಳಿಹಾಕಿದ್ದಾರೆ. ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸುತ್ತಿರುವುದರಿಂದ ಸೇಡಿನ ಕ್ರಮವಾಗಿ ಎಸಿಬಿ ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದೆ ಎನ್ನುವ ವರದಿಗಳು ತೀವ್ರ ಕೋಲಾಹಲ ಸೃಷ್ಟಿಸಿದ್ದವು. ಇಂದು ಐಟಿ ಇಲಾಖೆಯ ಮಹಾನಿರ್ದೇಶಕ ಬಾಲಕೃಷ್ಣ, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಅವರನ್ನು ಭೇಟಿ ಮಾಡಿ ವರದಿಗಳ ಬಗ್ಗೆ