ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೂ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಒತ್ತಡವಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೈನ ಸಮುದಾಯ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಉತ್ತರ ಕರ್ನಾಟಕದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿ ಎಂದು ಬಯಸಿದ್ದಾರೆ. ಆದರೆ, ನಾನು ಅಂತಿಮ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ.