ಬಳ್ಳಾರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ. ಇದರಿಂದಾಗಿ ತಮಿಳುನಾಡಿನಿಂದ ಕಾವೇರಿ ಕಾಟ ಕೂಡ ತಪ್ಪಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು.ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ ಸಲ್ಲಿಸುವ