ಮುಂಬರುವ ವಿಧಾನಸಭೆ ಚುನಾವಣೆ ಪೂರ್ವ ಸಿದ್ದತೆಯಲ್ಲಿ ಇತರ ಪಕ್ಷಗಳಿಗಿಂತ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ಮುಖಂಡರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿರುವುದು ತಲೆನೋವು ಉಂಟು ಮಾಡಿದೆ. ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಕೆಟ್ಗಳನ್ನು ಹಂಚುವಾಗ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಲ್ಲಿ ಜನರಿಗೆ ಪ್ರೀತಿಪಾತ್ರರಾಗಿರುವವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದವರಿಗೆ ಮಾತ್ರ ಪರಿಗಣಿಸಲಾಗುವುದು ಎಂದು ಸಿಎಂ ಧೃಢವಾದ ಸಂದೇಶ ರವಾನಿಸಿದ್ದಾರೆ. ಜನಪ್ರಿಯತೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡದ