ಕರ್ನಾಟಕ ರಾಜ್ಯದೊಳಗೆ ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಹಾಗೂ ಪ್ರತಿ ರವಿವಾರ ಸಂಪೂರ್ಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಷರತ್ತಿಗೊಳಪಟ್ಟು ಸಂಸ್ಥೆಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲು ಅನುಮತಿ ನೀಡಲಾಗಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಳ್ಳಾರಿ ಜಿಲ್ಲೆಗಳಿಂದ ಪ್ರತಿ ದಿನ ಬೆಳಿಗ್ಗೆ 07.00 ಗಂಟೆಯಿಂದ ಸಾಯಂಕಾಲ 07.00 ಗಂಟೆಯವರೆಗೆ ಬಸ್ಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜನಿಕ ಪ್ರಯಾಣಿಕರು ಪಾಲಿಸಬೇಕಾದ