ಉಡುಪಿ: ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ದೇವರ ತೊಟ್ಟಿಲು ಪೂಜೆ ನೋಡುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿರು ಪ್ರಕರಣ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಷಣ್ಮುಗಂ ಅವರ ಕುಟುಂಬ, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ನಂತರ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ವೀಕ್ಷಿಸುತ್ತಿದ್ದರು. ಈ ವೇಳೆ ದೇವರ ಆರತಿ ಪಡೆಯುವಾಗ ಕಳ್ಳರು ಷಣ್ಮುಗಂ ರವರ ಹೆಂಡತಿಯ ವ್ಯಾನಿಟಿ ಬ್ಯಾಗ್ನಲ್ಲಿದ್ದ