ವಿಶ್ವದ ಅತಿ ಸಿರಿವಂತ ಹಿಂದೂ ದೇವಾಲಯ ಎಂಬ ಖ್ಯಾತಿಯ ತಿರುಪತಿ ತಿಮ್ಮಪ್ಪನ ಖಜಾನೆ ಭರ್ಜರಿಯಾಗಿ ತುಂಬಿದೆ. ಕೊರೋನಾ ಕಾಲದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಿಸಿದ್ದ ತಿಮ್ಮಪ್ಪನ ಬಳಿ ಭೂಮಿ, ಒಡವೆ ಇತ್ಯಾದಿ ರೂಪದಲ್ಲಿ ಸಾವಿರಾರು ಕೋಟಿ ರೂ. ಸಂಪತ್ತು ಸಂಗ್ರಹಗೊಂಡಿದೆ. ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ದೇಶಾದ್ಯಂತ ಹೊಂದಿರುವ 960 ಸ್ವತ್ತುಗಳ ಮೌಲ್ಯ 85,705 ಕೋಟಿ ರೂ. ಆಗಿದೆ. ಆದರೆ ಈ ಸ್ವತ್ತುಗಳ ಇಂದಿನ ಮಾರುಕಟ್ಟೆ ಮೌಲ್ಯವು ಒಂದೂವರೆ ಪಟ್ಟು ಹೆಚ್ಚಿದ್ದು,