ಬೆಂಗಳೂರು: ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ಲೈಂಗಿಕ ಅಲ್ಪ ಸಂಖ್ಯಾತರ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮೊದಲ ಹೆಜ್ಜೆಯಾಗಿ ಮಂಗಳಮುಖಿಯರ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ನೀತಿ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷವಾಗಿ ಲೈಂಗಿಕ ಅಲ್ಪ ಸಂಖ್ಯಾತರಿಗೆ ಸರ್ಕಾರಿ ಸವಲತ್ತುಗಳನ್ನು ಒದಗಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ