ಬೆಂಗಳೂರು : ಇಂದು ನೂರಕ್ಕೆ ನೂರು ಪರ್ಸೆಂಟ್ ಬಹುಮತ ಸಾಬೀತು ಪಡಿಸ್ತೇವೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಜೆಡಿಎಸ್ ಗೆ 37 ಸ್ಥಾನ ಕೊಟ್ಟು ಥರ್ಡ್ ಪ್ಲೇಸ್ ನಲ್ಲಿ ಇಟ್ಟಿದ್ದರು. ಆದರೆ ಥರ್ಡ್ ಪ್ಲೇಸ್ ಬಂದವರು ಫಸ್ಟ್ ಪ್ಲೇಸ್ಗೆ ಬಂದರು. ಇದು ರಾಜ್ಯದ ದುರಂತ. ಈ ದುರಂತ ಹೋಗಿ, ಒಳ್ಳೆಯ ದಿನಗಳು ಬಂದಿವೆ. ಮತ್ತೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ