ಚಿಕ್ಕೋಡಿ : ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ.ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ.ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು