ಮಂಗಳೂರು : ಮನೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶ್ರೀಷಾ(14) ಎಂದು ಗುರುತಿಸಲಾಗಿದ್ದು, ಈತ 8 ನೇ ತರಗತಿಯಲ್ಲಿ ಓದುತ್ತಿದ್ದನು. ಭಾನುವಾರ ರಜೆ ಇದ್ದಿದ್ದರಿಂದ ಬಾಲಕ ಮನೆ ಅಂಗಳದಲ್ಲಿ ಸೀರೆಯಲ್ಲಿ ಮಾಡಿದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದನು. ಹೀಗೆ ಆಟವಾಡುತ್ತಿದ್ದಾಗ ಸೀರೆ ಆಕಸ್ಮಿಕವಾಗಿ ಶ್ರೀಷಾ ಕುತ್ತಿಗೆಗೆ ಬಿಗಿದಿದೆ. ಪರಿಣಾಮ ಆತ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಇದನ್ನು