ಒಕ್ಕಲಿಗ ಸಮುದಾಯದ ಪ್ರತಿಭಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ತಡೆಯಲು ಬಿಜೆಪಿ ರೂಪಿಸಿದೆ ಈ ತಂತ್ರ

ಬೆಂಗಳೂರು, ಬುಧವಾರ, 11 ಸೆಪ್ಟಂಬರ್ 2019 (10:25 IST)

ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ನಡೆಸುತ್ತಿರುವ ಪ್ರತಿಭಟನೆ ಜಾತಿ ಬಣ್ಣದ ತಿರುವು ಪಡೆದುಕೊಂಡಿರುವ ಹಿನ್ನಲೆಯಲ್ಲಿ ಒಕ್ಕಲಿಗ ಸಮುದಾಯದ ವಿರೋಧ ಬರದಂತೆ ತಡೆಯಲು ಬಿಜೆಪಿ ಹೊಸ ಪ್ಲ್ಯಾನ್ ವೊಂದನ್ನು ರೂಪಿಸಿದೆ ಎನ್ನಲಾಗಿದೆ.
ಇಂದು ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ಈ ನಡುವೆ ಒಕ್ಕಲಿಗ ಸಮುದಾಯವೇ ಬಿಜೆಪಿಯವರ ಟಾರ್ಗೆಟ್ ಎಂದು ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಬಿಜೆಪಿ, ಒಕ್ಕಲಿಗ ಸಮುದಾಯದ ವಿರೋಧ ತಡೆಯಲು ಸಪ್ತ ಸಮರ ಆರಂಭಿಸಿದೆ ಎನ್ನಲಾಗಿದೆ.


ಕೇಂದ್ರ ಸಚಿವ ಡಿ ವಿ ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಸಂಸದರಾದ ಪ್ರತಾಪ್ ಸಿಂಹ, ಬಿ ಎನ್ ಬಚ್ಚೇಗೌಡ, ಡಿಸಿಎಂ ಅಶ್ವಥ್ ನಾರಾಯಣ, ಸಚಿವರಾದ ಆರ್ ಅಶೋಕ್ ಮತ್ತು ಸಿ ಟಿ ರವಿ ಈ ಏಳು ಮಂದಿ ಒಕ್ಕಲಿಗ ನಾಯಕರ ಮೂಲಕ ಜಾತಿ ಸಂಘರ್ಷ ಶಮನ ಮಾಡಲು ಬಿಜೆಪಿ ಮುಂದಾಗಿದೆ. ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಈ ಪರಿಸ್ಥಿತಿಯನ್ನು ಈ ಸಪ್ತ ನಾಯಕರೇ ಹೋರಾಟ ನಡೆಸಿ ನಿಭಾಯಿಸಬೇಕು  ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ...

news

ಯುವ ದಸರಾ ಉದ್ಘಾಟಿಸಲು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು?

ಬೆಂಗಳೂರು: ಈ ಬಾರಿ ಯುವ ದಸರಾ ಉದ್ಘಾಟನೆ ಮಾಡಲು ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ರಾಜ್ಯ ...

news

ಆರೇ ತಿಂಗಳಲ್ಲಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ನಟಿ ಊರ್ಮಿಳಾ ಮಾರ್ತೋಂಡ್ಕರ್

ನವದೆಹಲಿ: ಕಳೆದ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ನಟಿ ಊರ್ಮಿಳಾ ...

news

ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಗಿಂತ ದುಬಾರಿಯಾಗಿದೆ ಹಾಲು

ಕರಾಚಿ : ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಕ್ಕಿಂತ ಹಾಲಿನ ...