ಬೀದರ್ : ದೇಶದಲ್ಲೇ ಕರ್ನಾಟಕ ನಂಬರ್ 1 ಆಗಲು ಡಬಲ್ ಎಂಜಿನ್ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಘೋಷಿಸುವ ಮೂಲಕ ಮೋದಿ ಗಮನ ಸೆಳೆದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ನಲ್ಲಿ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ನರೇಂದ್ರ ಮೋದಿ ಮಾತನಾಡಿದರು.ಜಗದ್ಗುರು ಬಸವೇಶ್ವರ ಮತ್ತು ಶಿವಶರಣರ ಭೂಮಿಗೆ ನನ್ನ ನಮಸ್ಕಾರಗಳು