ಮೈಸೂರು, ಸೆ 4: ಕೊರೊನಾ ಸೋಂಕಿನ ಕಾರಣದಿಂದ ಕಳೆದ ವರ್ಷದಂತೆ ಈ ಬಾರಿಯೂ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ದಸರಾ ಸಮಿತಿ ಸಭೆಯಲ್ಲಿ ಸರಳ ಮೈಸೂರು ದಸರಾ ಆಚರಣೆಗೆ ನಿರ್ಧಾರ ಮಾಡಲಾಯಿತು. ಇದಕ್ಕಾಗಿ 6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸೆ.20ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಕೋವಿಡ್ ಪರಿಸ್ಥಿತಿ ನೋಡಿ ಕಾರ್ಯಕ್ರಮಗಳನ್ನು ನಿಗದಿ ಮಾಡಲಾಗುತ್ತದೆ, ಎಂದು ಬೆಂಗಳೂರಿನಲ್ಲಿ ಸಚಿವ