ಬೆಂಗಳೂರು : ಬಿಜೆಪಿ 125-130 ಸ್ಥಾನಗಳನ್ನು ಗೆಲ್ಲುವುದು ಖಚಿತ, ನಾವೇ ಈ ಬಾರಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿದ ರಾಜ್ಯದ ಜನತೆಗೆ ವಿನಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನತೆ ಈ ಬಾರಿ ಪರಿವರ್ತನೆಗಾಗಿ ಮತ ಚಲಾಯಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ನಮಗೆ ಪೂರಕ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಎರಡು ದಿನ ಕಾರ್ಯಕರ್ತರನ್ನು ಭೇಟಿ ಮಾಡಿ