ಬೆಂಗಳೂರು : ಶುಕ್ರವಾರ ರಾತ್ರಿಯಿಂದ ಶುರುವಾಗಬೇಕಿದ್ದ ವಾರಾಂತ್ಯದ ಕರ್ಫ್ಯೂ ಬಹುಷಃ ಇರಲಿಕ್ಕಿಲ್ಲ.ವಿಕೆಂಡ್ ಕರ್ಫ್ಯೂಗೆ ವ್ಯಕ್ತವಾಗ್ತಿರುವ ಜನಾಕ್ರೋಶ ಮತ್ತು ಪಕ್ಷದಲ್ಲಿಯೇ ಕೇಳಿಬರುತ್ತಿರುವ ಅಪಸ್ವರದ ಕಾರಣದಿಂದಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ.ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಉನ್ನತಮಟ್ಟದ ಸಭೆ ಕರೆದಿದ್ದು, ಈ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದತಿ ತೀರ್ಮಾನ ತೆಗೆದುಕೊಳ್ಳುವುದು ಬಹುತೇಕ ಪಕ್ಕಾ ಆಗಿದೆ. ಮುಖ್ಯಮಂತ್ರಿಗಳು ಈಗಾಗಲೇ ಬೆಂಗಳೂರು ಪೊಲೀಸ್ ಇಲಾಖೆಗೆ