ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ?