ಹಲವು ವರ್ಷಗಳ ನಿಧಾನಗತಿಯ ಕಾಮಗಾರಿಯ ನಂತರ ತೊಕೊಟ್ಟು ಫ್ಲೈ ಓವರ್ ಕೆಲಸ ಪೂರ್ಣಗೊಂಡಿದ್ದು ಇಂದಿನಿಂದ ಅದರಲ್ಲಿ ವಾಹನ ಸಂಚಾರ ಆರಂಭವಾಗಿದ್ದರೂ ಆದರೆ ಅವ್ಯವಸ್ಥೆ ತಾಂಡವವಾಡುತ್ತಿದೆ. ಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ವಾಹನಗಳಿಗೆ ತಿರುವು ಕೊಡುವ ಬಗ್ಗೆ ಸಮರ್ಪಕ ವ್ಯವಸ್ಥೆ ಮಾಡದಿರುವ ಕಾರಣ ಅಪಘಾತದ ಸಾಧ್ಯತೆಗಳು ಹೆಚ್ಚಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಗಮನಹರಿಸಿ ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಹೋಗಲು ಸಮರ್ಪಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಉಳ್ಳಾಲ ವಲಯ ಡಿವೈಎಫ್ಐ ಒತ್ತಾಯಿಸಿದೆ