ಹುಬ್ಬಳ್ಳಿ: 1ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ಮುಖ್ಯಮಂತ್ರಿಗ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದರು. ಗುರುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಅವಲೋಕಿಸಿ 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.