ಮಾರಕ ಕೊರೊನಾ ವೈರಸ್ ಗೆ ಈಗಾಗಲೇ ಮೂವರು ಸಾವನ್ನಪ್ಪಿದ್ದರಿಂದಾಗಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ. ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಏಪ್ರಿಲ್ 30ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ.ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು