ಬೆಂಗಳೂರು: ಅಪಾರ್ಟ್ ಮೆಂಟ್ ಸಂಘ ಸಂಸ್ಥೆಗಳು, ನಾಗರಿಕರ ಕ್ಷೇಮಾಭಿವೃದ್ಧಿ ಸಂಘಗಳು, ಕೆಲಸದ ಜಾಗಗಳಲ್ಲಿ ನಡೆಸುತ್ತಿದ್ದ ವ್ಯಾಕ್ಸಿನ್ ವಿತರಣೆ ಕಾರ್ಯಕ್ರಮಗಳು ಲಸಿಕೆ ಪೂರೈಕೆಯಿಲ್ಲದೆ ಸ್ಥಗಿತಗೊಂಡಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಇಂದು ನಗರದ ವ್ಯಾಕ್ಸಿನ್ ದಾಸ್ತಾನು ಕೇಂದ್ರವಾದ ದಾಸಪ್ಪ ಆಸ್ಪತ್ರೆ ಹಾಗೂ ಇಂದಿರಾ ಕ್ಯಾಂಟೀನ್ ನ ಉಚಿತ ಊಟ ವಿತರಣೆಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ನಗರದಲ್ಲಿ ಎರಡನೇ