ತುಮಕೂರು : ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರಾಗಿದ್ದು, ಗುರುವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ತು ವರ್ಷದ ಹಿಂದೆಯೇ ತಂದೆ-ತಾಯಿ ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿದ್ದ ಮೂವರು ಯುವತಿಯರಿಗೆ ಅಜ್ಜಿಯೂ ಸಾವಿನಪ್ಪಿದ್ದು ಮಾನಸಿಕ