ಮಂಡ್ಯ : ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಅಭಿ(20), ಕೃಷ್ಣ(23) ಹಾಗೂ ಪ್ರಶಾಂತ್(21) ಮೃತಪಟ್ಟ ಯುವಕರು. ಮುದ್ದೂರಿನಿಂದ ಬರುತ್ತಿದ್ದ ಆಟೋಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಯುವಕರ ಮಥತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.