ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಅಗಸ್ಟ್ ತಿಂಗಳಿನಿಂದ ಕೂಪನ್ ಮೂಲಕ ಪಡಿತರ ಧಾನ್ಯ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದರು. ನಕಲಿ ಕಾರ್ಡ್ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಗಸ್ಟ್ ತಿಂಗಳಿಂದ ಪ್ರಾಯೋಗಿಕವಾಗಿ ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದರೇ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಕೂಪನ್ ಹೊಂದಿರುವ ಫಲಾನುಭವಿಗಳು ನ್ಯಾಯಬೆಲ್ ಅಂಗಡಿಗೆ ಹೋಗಿ ಆಹಾರ ಪದಾರ್ಥಗಳನ್ನು ಪಡೆಯಬೇಕಂತ್ತಿಲ್ಲ.